ಶಿವಮೊಗ್ಗ | ಮಂಜುನಾಥ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ

ಶಿವಮೊಗ್ಗ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಮೃತರಾದ ಶಿವಮೊಗ್ಗದ ಮಂಜುನಾಥ್ ರಾವ್ ನಿವಾಸಕ್ಕೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ನಗರದ ವಿಜಯನಗರದಲ್ಲಿರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಖಾದರ್ ಅವರು, ಮೃತ ಮಂಜುನಾಥ್ ರಾವ್ ಪತ್ನಿ ಪಲ್ಲವಿ, ಮಗ ಅಭಿಜಯ್ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ರೀತಿಯ ಘಟನೆ ಯಾರಿಗೂ ಆಗಬಾರದು, ಪ್ರವಾಸಿ ತಾಣದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಉಗ್ರರನ್ನು ಸುಮ್ಮನೆ ಬಿಡಬಾರದು ಎಂದು ಪಲ್ಲವಿ ಅವರು ಸ್ಪೀಕರ್‌ಗೆ ಮನವಿ ಮಾಡಿದರು. ಈ ವೇಳೆ ರಾಜ್ಯ ಸರಕಾರ ನಿಮ್ಮ ಜೊತೆ ಇದೆ ಎಂದು ಯು.ಟಿ.ಖಾದರ್ ಧೈರ್ಯ ತುಂಬಿದರು.
Next Story