Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ...

ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕನಸು ಸಾಕಾರಕ್ಕೆ ಸರಕಾರದಿಂದಲೇ ʼವಿಶೇಷ ಕಲಿಕಾ ತರಬೇತಿʼ : ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ10 Feb 2024 4:57 PM IST
share
ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕನಸು ಸಾಕಾರಕ್ಕೆ ಸರಕಾರದಿಂದಲೇ ʼವಿಶೇಷ ಕಲಿಕಾ ತರಬೇತಿʼ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಎಸೆಸೆಲ್ಸಿ, ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಲಿಕಾ ತರಗತಿಗಳನ್ನು ಸರಕಾರದ ವತಿಯಿಂದಲೇ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ತೀರ್ಥಹಳ್ಳಿಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ತೀರ್ಥಹಳ್ಳಿ, ಪಟ್ಟಣ ಪಂಚಾಯಿತಿ ತೀರ್ಥಹಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ (ಕ್ರಾಶ್ ಕೋರ್ಸ್) ವಿಶೇಷ ತರಬೇತಿ ತರಗತಿಗಳಿಂದಾಗಿ ಜನಸಾಮಾನ್ಯ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂವಾಗಲಿದೆ ಅಲ್ಲದೆ ಅವರ ಕುಟುಂಬದ ಮುಖ್ಯಸ್ಥರಿಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ ಎಂದರು.

ಸರಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದವರ ಫಲಾನುಭವಿಗಳ ಸಮಾವೇಶ ಮಾತ್ರವಲ್ಲ, ಇದು ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವಲ್ಲಿಯೂ ಈ ವೇದಿಕೆ ನಿರ್ಮಾಣಗೊಂಡಿದ್ದು, ಸೌಲಭ್ಯ ವಂಚಿತ ಫಲಾನುಭವಿಗಳು ಸಂಬಂಧಿಸಿದ ಇಲಾಖಾ ಅಧಿಕಾರಿಗಳನ್ನು ಇಲ್ಲಿಯೇ ಸಂಪರ್ಕಿಸಿ, ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಸಮಸ್ಯೆಗಳು ಎದುರಾದಲ್ಲಿ ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಈಗಾಗಲೇ ಸೌಲಭ್ಯ ಪಡೆದ ಫಲಾನುಭವಿಗಳು ಪಕ್ಷಾತೀತವಾಗಿ ಅರ್ಹರನ್ನು ಗುರುತಿಸಿ ಸೌಲಭ್ಯ ದೊರೆಕಿಸಿಕೊಡಲು ಮುಂದಾಗಬೇಕೆಂದು ಅವರು ಮನವಿ ಮಾಡಿದರು.

ಸರಕಾರವು ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ನುಡಿದಂತೆ ನಡೆದು, ಮುಂದೆ ಸಾಗುತ್ತಿದೆ. ಮುಂದೆಯೂ ಈ ಯೋಜನೆಗಳು ಜಾರಿಯಲ್ಲಿರಲಿವೆ ಎಂದ ಅವರು, ಪ್ರಸಕ್ತ ಸರಕಾರವು ಪ್ರತಿ ಮನೆಯ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದು, ಜನರ ನೋವು-ನಲಿವುಗಳಿಗೆ ದ್ವನಿಯಾಗಲಿದೆ. ಅಲ್ಲದೇ ನೆರವಿಗೆ ಧಾವಿಸಲಿದೆ ಎಂದರು.

ಮಾಜಿ ಮುಖ್ಯಮಂತ್ರಿಗಳಾಗಿದ್ದ ಎಸ್.ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ರೈತರ ಹೊಲಗಳಿಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ದಶಕಗಳ ನಂತರವೂ ಜಾರಿಯಲ್ಲಿರುವುದು ಹರ್ಷದ ಸಂಗತಿಯಾಗಿದೆ. ಅವರ ಮಾರ್ಗದರ್ಶನದಲ್ಲಿಯೇ ನಾವೂ ಕೂಡ ಆಡಳಿತ ನಡೆಸಲು ಮುಂದಾಗಿದ್ದೇವೆ. ವಿಶೇಷವಾಗಿ ಅಂದಿನ ಪ್ರಣಾಳಿಕೆ ಸಮಿತಿಯ ಸದಸ್ಯನಾಗಿದ್ದೆ. ಪ್ರಣಾಳಿಕೆ ಇಂದು ಅನುಷ್ಠಾನಗೊಂಡಿದೆ ಎಂಬ ಹೆಮ್ಮೆ ನನಗಿದೆ ಎಂದರು.

ರಾಜ್ಯದ ಪ್ರತಿ ಮನೆಮನೆಗಳಿಗೆ ಉಚಿತ ಬೆಳಕು ನೀಡಿದ ಕೀರ್ತಿ ನಮ್ಮದು. ಯುವನಿಧಿ ಯೋಜನೆಯಡಿ ಯುವಕರು ತಮ್ಮ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಸರಕಾರ ನೀಡುವ ಸಹಾಯಧನ ಉಪಯುಕ್ತವಾಗಿರುವುದು ನಿರುದ್ಯೋಗಿಗಳಾಗಿ ವಿದ್ಯಾವಂತರ ಎಲ್ಲರ ಮುಖದಲ್ಲಿ ಮಂದಹಾಸ ಮೂಡಿಸಿರುವುದನ್ನು ಕಾಣಬಹುದಾಗಿದೆ ಎಂದರು.

ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಮಕ್ಕಳಿಗೆ ಸಮವಸ್ತ್ರ, ಶೂ, ಪಠ್ಯಪುಸ್ತಕ, ಮೊಟ್ಟೆ, ಬಾಳೆಹಣ್ಣು, ಚುಕ್ಕಿ, ಹಾಲು ಜೊತೆಗೆ ಪೌಷ್ಠಿಕ ಆಹಾರ ರಾಗಿ ಮಾಲ್ಟ್ ನೀಡಲು ಕ್ರಮವಹಿಸಲಾಗುತ್ತಿದೆ. ಎಸೆಸೆಲ್ಸಿ ಮತ್ತು ಪಿ.ಯು. ಅನುತ್ತೀರ್ಣ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣ ಪಡೆದು ಮುಂದುವರೆಯಲು ಅನುಕೂಲವಾಗುವಂತೆ ಮೂರು ಬಾರಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿಯುತ್ತಿದ್ದ ಸುಮಾರು 40 ಸಾವಿರ ಮಕ್ಕಳು ಶಿಕ್ಷಣದ ಮುಖ್ಯವಾಹಿನಿಯಲ್ಲಿ ಮುಂದುವರೆಯುತ್ತಿದ್ದಾರೆ ಎಂದರು.

ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸಲು ಸರಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಅವಧಿಯಲ್ಲಿ ಅಲ್ಲಿನ ಶಿಕ್ಷಕರು ಮಕ್ಕಳಿಗೆ ವಿಶೇಷ ಕಲಿಕಾ ತರಗತಿಗಳನ್ನು ಮಾಡುವಂತೆ ಮನವಿ ಮಾಡಿದ ಅವರು, ಸರಕಾರಿ ಶಾಲೆಗಳಲ್ಲಿ ನೇಮಕವಾಗಿರುವ ಶಿಕ್ಷಕರೆಲ್ಲರೂ ಪ್ರತಿಭಾವಂತರೇ ಇರುವುದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಗೀತಾ ರಮೇಶ್, ಉಪಾಧ್ಯಕ್ಷ ರಹ್ಮತ್ ಉಲ್ಲಾ ಅಸಾದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಕಾರ್ಮಿಕ ಅಧಿಕಾರಿ ಸುಮಾ, ಉದ್ಯೋಗಾಧಿಕಾರಿ ಖಲಂದರ್ ಖಾನ್, ತಹಶೀಲ್ದಾರ್, ತಾಲೂಕು ಪಂಚಾಯತ್ ಇಓ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X