ಪ್ರಚಾರದಲ್ಲಿ ಪ್ರಧಾನಿ ಮೋದಿ ಫೋಟೊ ಬಳಕೆ : ಕೋರ್ಟ್ ಮೊರೆ ಹೋದ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮೋದಿ ಫೋಟೊ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್ನಲ್ಲಿ ಈಶ್ವರಪ್ಪ ಅವರು ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು.
ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ʼಮೋದಿ ಅವರಪ್ಪನ ಆಸ್ತಿಯಾʼ ಎಂದು ವಾಗ್ದಾಳಿ ನಡೆಸಿದ್ದರು. ಇದೀಗ ಮೋದಿ ಫೋಟೋ ವಿಚಾರವಾಗಿ ಕೋರ್ಟ್ ಮೊರೆಹೋಗಿದ್ದಾರೆ.
Next Story