ಡಾ.ಸಿ.ಎನ್.ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ: ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಮಾ.16: ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾಗಿರುವ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ ಎಂದು ಹಿರಿಯ ಸಾಹಿತಿ, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಈ ಬಗ್ಗೆ 'X'ನಲ್ಲಿ ಪೋಸ್ಟ್ ವೊಂದನ್ನು ಹಾಕಿರುವ ನಾಗತಿಹಳ್ಳಿ, ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ? ಸಮಾಜವನ್ನು ಕಟ್ಟಲು ಸಾವಿರ ದಾರಿಗಳಿವೆ. ನಿಮಗೆ ಇದು ಬೇಕಿತ್ತೆ ಎಂದು ಡಾ. ಸಿ.ಎನ್. ಮಂಜುನಾಥ್ ರನ್ನು ಪ್ರಶ್ನಿಸಿದ್ದಾರೆ.
ವೈದ್ಯಕೀಯ ಕ್ಷೇತ್ರದಲ್ಲಿ ಪಡೆದುದನ್ನು ರಾಜಕೀಯದಲ್ಲಿ ಕಳೆದುಕೊಳ್ಳಬಹುದೇನೋ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನಾಗತಿಹಳ್ಳಿ ಚಂದ್ರಶೇಖರ್ ಅವರ ಈ ಪೋಸ್ಟ್ ಗೆ ಪರ –ವಿರೋಧ ಅಭಿಪ್ರಾಯಗಳು ಸಾಮಾಜಿ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಅಳಿಯನಾಗಿರುವ ಡಾ.ಸಿ.ಎನ್.ಮಂಜುನಾಥ್ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಇದು ಕಾಂಗ್ರೆಸ್ ಸಂಸದರಾಗಿರುವ ಡಿ.ಕೆ. ಸುರೇಶ್ ಪ್ರತಿನಿಧಿಸುವ ಕ್ಷೇತ್ರವಾಗಿದೆ.