ಬಾರ್ಡರ್-ಗಾವಸ್ಕರ್ ಟ್ರೋಫಿ| ಬೂಮ್ರಾ ಬೌಲಿಂಗ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯ; 104ಕ್ಕೆ ಆಲೌಟ್
Photo credit: PTI
ಪರ್ತ್: ಬಾಲಗೋಂಚಿ ಬ್ಯಾಟರ್ ಗಳಾದ ಮಿಚೆಲ್ ಸ್ಟಾರ್ಕ್ ಹಾಗೂ ಜೋಶ್ ಹೇಝಲ್ ವುಡ್ ತೋರಿದ ಪ್ರತಿರೋಧದಿಂದ ಆಸ್ಟ್ರೇಲಿಯ ತಂಡ ಕೊನೆಗೂ 104 ರನ್ ಗಳಿಸಿ ಆಲೌಟ್ ಆಯಿತು.
ಇದಕ್ಕೂ ಮುನ್ನ, ನಿನ್ನೆ 7 ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿದ್ದ ಆಸ್ಟ್ರೇಲಿಯ ತಂಡ, ಇಂದು ಬ್ಯಾಟಿಂಗ್ ಗೆ ಇಳಿಯುತ್ತಿದ್ದಂತೆಯೆ, ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಹಾಗೂ ನಥಾನ್ ಲಿಯೋನ್ ರನ್ನು ಕೇವಲ 12 ರನ್ ಗಳ ಅಂತರದಲ್ಲಿ ಕಳೆದುಕೊಂಡಿತು. ನಂತರ ಜೊತೆಯಾದ ಮಿಚೆಲ್ ಸ್ಟಾರ್ಕ್ ಹಾಗೂ ಜೋಶ್ ಹೇಝಲ್ ವುಡ್ ಭಾರತದ ಬೌಲರ್ ಗಳಿಗೆ ಪ್ರತಿರೋಧವೊಡ್ಡಿ ತಂಡದ ಮೊತ್ತವನ್ನು 100ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಆಸ್ಟ್ರೇಲಿಯ ತಂಡದ ಬ್ಯಾಟಿಂಗ್ ನಡು ಮುರಿದ ಭಾರತ ತಂಡದ ನಾಯಕ ಜಸ್ ಪ್ರೀತ್ ಬೂಮ್ರಾ, ಕೇವಲ 30 ರನ್ ನೀಡಿ 5 ವಿಕೆಟ್ ಗಳನ್ನು ಕಬಳಿಸಿದರು. ಮುಹಮ್ಮದ್ ಸಿರಾಜ್ ಮತ್ತು ಹರ್ಷಿತ್ ರಾಣಾ ತಲಾ ಎರಡು ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಕಿತ್ತರು.
ಇತ್ತೀಚಿನ ವರದಿಗಳ ಪ್ರಕಾರ, ಎರಡನೆ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ, ಯಾವುದೇ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ.