ಏಕದಿನ ಕ್ರಿಕೆಟಿಗೆ ಪಾದಾರ್ಪಣೆಗೈದ ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ
Photo - BCCI
ನಾಗ್ಪುರ: ಇಂಗ್ಲೆಂಡ್ ಕ್ರಿಕೆಟ್ ತಂಡದ ವಿರುದ್ಧ ‘ಕಿತ್ತಳೆ ನಗರ’ದ ವಿಸಿಎ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೊದಲ ಪಂದ್ಯದ ವೇಳೆ ಯಶಸ್ವಿ ಜೈಸ್ವಾಲ್ ಹಾಗೂ ಹರ್ಷಿತ್ ರಾಣಾ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟಿಗೆ ಪಾದಾರ್ಪಣೆಗೈದಿದ್ದಾರೆ.
ನಾಯಕ ರೋಹಿತ್ ಶರ್ಮಾ ಅವರು 3 ಪಂದ್ಯಗಳ ಏಕದಿನ ಸರಣಿಯ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ನಂತರ ಉಭಯ ಆಟಗಾರರು ಆಡುವ 11ರ ಬಳಗಕ್ಕೆ ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿದರು. ಟಾಸ್ ಜಯಿಸಿದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
2023ರಲ್ಲಿ ವೆಸ್ಟ್ಇಂಡೀಸ್ ಕ್ರಿಕೆಟ್ ಪ್ರವಾಸ ಕೈಗೊಂಡಿದ್ದಾಗ ಜೈಸ್ವಾಲ್ ಅವರು ಭಾರತದ ಪರ ಚೊಚ್ಚಲ ಟೆಸ್ಟ್ ಹಾಗೂ ಟಿ20 ಪಂದ್ಯಗಳನ್ನು ಆಡಿದ್ದರು.
ಇದೇ ವೇಳೆ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಂದರ್ಭ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ್ದ ಹರ್ಷಿತ್ ರಾಣಾ ಅವರು ಕಳೆದ ವಾರವಷ್ಟೇ ಇಂಗ್ಲೆಂಡ್ ವಿರುದ್ಧ ತನ್ನ ಚೊಚ್ಚಲ ಪಂದ್ಯ ಆಡಿದ್ದರು.
Next Story