ಏಶ್ಯಕಪ್ ಸೂಪರ್-4 ಪಂದ್ಯ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ
Photo: twitter \ @ICC
ಕೊಲಂಬೊ, ಸೆ.11: ವಿರಾಟ್ ಕೊಹ್ಲಿ (ಔಟಾಗದೆ 122 ರನ್, 94 ಎಸೆತ, 9 ಬೌಂಡರಿ, 3 ಸಿಕ್ಸರ್)ಹಾಗೂ ಕೆ.ಎಲ್.ರಾಹುಲ್(ಔಟಾಗದೆ 111 ರನ್, 106 ಎಸೆತ, 12 ಬೌಂಡರಿ, 2 ಸಿಕ್ಸರ್)ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಕುಲದೀಪ್ ಯಾದವ್(5-25) ನೇತೃತ್ವದ ಬೌಲರ್ಗಳ ನೆರವಿನಿಂದ ಭಾರತ ಕ್ರಿಕೆಟ್ ತಂಡ ಏಶ್ಯಕಪ್ನ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನವನ್ನು 228 ರನ್ ಅಂತರದಿಂದ ಹೀನಾಯವಾಗಿ ಸೋಲಿಸಿದೆೆ.
ಮೀಸಲು ದಿನವಾದ ಸೋಮವಾರ ನಡೆದ ಪಂದ್ಯದಲ್ಲಿ ಗೆಲ್ಲಲು 357 ರನ್ ಗುರಿ ಪಡೆದಿದ್ದ ಪಾಕಿಸ್ತಾನ 32 ಓವರ್ಗಳಲ್ಲಿ 128 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಗಾಯದ ಸಮಸ್ಯೆಯ ಕಾರಣಕ್ಕೆ ನಸೀಮ್ ಶಾ ಹಾಗೂ ಹಾರಿಸ್ ರವೂಫ್ ಬ್ಯಾಟಿಂಗ್ ಮಾಡಲಿಲ್ಲ. ಭಾರತದ ಪರ ಯಾದವ್ ಯಶಸ್ವಿ ಪ್ರದರ್ಶನ ನೀಡಿದರೆ, ಶಾರ್ದೂಲ್ ಠಾಕೂರ್, ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರೀತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದರು.
3ನೇ ವಿಕೆಟ್ಗೆ ಮುರಿಯದ ಜೊತೆಯಾಟದಲ್ಲಿ 194 ಎಸೆತಗಳಲ್ಲಿ 233 ರನ್ ಜೊತೆಯಾಟ ನಡೆಸಿದ ಕೊಹ್ಲಿ ಹಾಗೂ ರಾಹುಲ್ ಭಾರತವು ನಿಗದಿತ 50 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 356 ರನ್ ಕಲೆ ಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು.