ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ | ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

Photo credit: X/@ICC
ದುಬೈ: ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಳಲ್ಲಿ ಭಾರತ ತಂಡವು ಆಸ್ಟ್ರೇಲಿಯ ವಿರುದ್ಧ ಆಡಿರುವ 4 ಪಂದ್ಯಗಳಲ್ಲಿ 2ರಲ್ಲಿ ಜಯ ಸಾಧಿಸಿದ್ದು, ಒಂದರಲ್ಲಿ ಸೋತಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.
Next Story