ಟಾಸ್ ಗೆದ್ದ ಆಸ್ಟ್ರೇಲಿಯಾ, ಫೀಲ್ಡಿಂಗ್ ಆಯ್ಕೆ
ಭಾರತ ವಿರುದ್ಧ ವಿಶ್ವಕಪ್ ಫೈನಲ್ ಪಂದ್ಯ
Photo : cricketworldcup.com
ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪುರುಷರ ಏಕದಿನ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಆಸ್ಟ್ರೇಲಿಯಾ 5 ಬಾರಿ ವಿಶ್ವಕಪ್ ಜಯಿಸಿದ್ದರೆ, ಭಾರತ 2 ಏಕದಿನ ವಿಶ್ವಕಪ್ ಗೆದ್ದಿದೆ. ಆತಿಥೇಯ ಭಾರತ ಈ ಬಾರಿ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ. 2003ರ ವಿಶ್ವಕಪ್ ನಲ್ಲಿ ಭಾರತ ಆಸ್ಟ್ರೇಲಿಯಾ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಗಳಿಸಿತ್ತು.
Next Story