“ಅವರ ಹಾದಿಯಲ್ಲಿ ಮುಳ್ಳುಗಳನ್ನು ಇರಿಸಿದವರು…”: ವಿನೇಶ್ ಫೋಗಟ್ ಗೆಲುವಿನ ಬೆನ್ನಲ್ಲೇ ಬಜರಂಗ್ ಪುನಿಯಾ ಪ್ರತಿಕ್ರಿಯಿಸಿದ್ದು ಹೀಗೆ...
Photo credit: PTI
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಫೈನಲ್ ಪ್ರವೇಶಿಸಿರುವ ಹಿನ್ನೆಲೆಯಲ್ಲಿ 2020 ಟೋಕಿಯೋ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಮಾರ್ಮಿಕ ಪ್ರತಿಕ್ರಿಯೆ ನೀಡಿದ್ದಾರೆ.
“ಇವರು ದೇಶದ ಪುತ್ರಿಯರು, ಅವರು ಯಾವತ್ತೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಪುತ್ರಿಯಂದಿರ ಹಾದಿಯಲ್ಲಿ ಸದಾ ಮುಳ್ಳುಗಳನ್ನಿರಿಸಿದವರು ಇವರಿಂದ ಕನಿಷ್ಠ ಪಾಠ ಕಲಿತು ಮುಂದೆ ಇವರ ಭವಿಷ್ಯದ ಹಾದಿಯಲ್ಲಿ ಮುಳ್ಳುಗಳನ್ನು ಇರಿಸುವುದರಿಂದ ದೂರ ಉಳಿಯಬಹುದು,” ಎಂದು ಪುನಿಯಾ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮುಂಚೆ ವಿನೇಶ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾಗ ಆಕೆಯನ್ನು “ಸಿಂಹಿಣಿ” ಎಂದಿದ್ದರಲ್ಲದೆ ದೇಶದ ರಸ್ತೆಗಳಲ್ಲಿ ತುಳಿದು ಎಳೆಯಲಾಗಿತ್ತು ಎಂಬುದನ್ನು ನೆನಪಿಸಿದರು.
ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದಿಲ್ಲಿಯಲ್ಲಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತಿತರ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದ ವೇಳೆ ಅವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
विनेश ने इतिहास रच दिया है. विनेश महिला कुश्ती में ओलंपिक के फाइनल में पहुंचने वाली पहली भारतीय महिला पहलवान बन गई हैं.
— Bajrang Punia (@BajrangPunia) August 6, 2024
आज सब भारतीयों की आंखों में आसूं हैं.
ये देश की बेटियां हैं, जिन्होंने हमेशा ही देश की शान बढ़ाई है. जिन लोगों ने हमेशा इन बेटियों की राह में कांटे बिछाए… pic.twitter.com/NJ8t4p4h0Y