ಚಾಂಪಿಯನ್ಸ್ ಟ್ರೋಫಿ | ನ್ಯೂಝಿಲೆಂಡ್ ಗೆ 250 ರನ್ ಗಳ ಗುರಿ ನೀಡಿದ ಭಾರತ
ಶ್ರೇಯಸ್ ಅಯ್ಯರ್ ಅರ್ಧ ಶತಕ, ಮ್ಯಾಟ್ ಹೆನ್ರಿ 5 ವಿಕೆಟ್

PC | @BCCI
ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ- ನ್ಯೂಝಿಲೆಂಡ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ಗೆ 250 ರನ್ ಗಳ ಗುರಿ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಭಾರತ ತಂಡ ಕಳಪೆ ಆರಂಭ ಪಡೆಯಿತು. ಆರಂಭಿಕರಾಗಿ ಬ್ಯಾಟಿಂಗ್ ಇಳಿದಿದ್ದ ರೋಹಿತ್ ಶರ್ಮಾ 17 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರೆ, ಶುಭಮನ್ ಗಿಲ್ 7 ಎಸೆತಗಳಲ್ಲಿ 2 ರನ್ ಗಳಿಸಿ ಔಟಾದರು.
ನಂತರ ಕ್ರಮಾಂಕದಲ್ಲಿ ಬಂದ ವಿರಾಟ್ ಕೊಹ್ಲಿ 14 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರೆ, ಅಕ್ಷರ್ ಪಟೇಲ್ 61 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸ್ ನೆರವಿನೊಂದಿಗೆ 42 ರನ್ ಗಳಿಸಿ ಔಟಾದರು.
ನಂತರ ತಂಡಕ್ಕೆ ಶ್ರೇಯಸ್ ಅಯ್ಯರ್ ಆಸರೆಯಾದರೂ, 36.2ನೇ ಓವರ್ ನಲ್ಲಿ 98 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸ್ ನೆರವಿನೊಂದಿಗೆ 79 ರನ್ ಗಳಿಸಿ ಔಟಾದರು.
ನಂತರ ಕ್ರಮಾಂಕದಲ್ಲಿ ಬಂದ ಕೆ.ಎಲ್.ರಾಹುಲ್ 29 ಎಸೆತಗಳಲ್ಲಿ 1 ಬೌಂಡರಿ ನೆರವಿನೊಂದಿಗೆ 23 ರನ್ ಗಳಿಸಿ ಔಟಾದರೆ, ರವೀಂದ್ರ ಜಡೇಜಾ 20 ಎಸೆತಗಳಲ್ಲಿ 1 ಬೌಂಡರಿ ನೆರವಿನೊಂದಿಗೆ 16 ರನ್ ಗಳಿಸಿ ಔಟಾದರು.
ನಂತರ ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ 45 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸ್ ನೆರವಿನೊಂದಿಗೆ 45 ರನ್ ಗಳಿಸಿ ಔಟಾದರು.
ನ್ಯೂಝಿಲೆಂಡ್ ಪರ ಮ್ಯಾಟ್ ಹೆನ್ರಿ 5 ವಿಕೆಟ್ ಪಡೆದರೆ, ಕೈಲ್ ಜೇಮಿಸನ್, ರಚಿನ್ ರವೀಂದ್ರ, ವಿಲ್ ಒರೂರ್ಕ್, ಮಿಚೆಲ್ ಸ್ಯಾಂಟ್ನರ್ ತಲಾ 1 ವಿಕೆಟ್ ಪಡೆದರು.