ಚಾಂಪಿಯನ್ಸ್ ಟ್ರೋಫಿ | ಆಸ್ಟ್ರೇಲಿಯ ವಿರುದ್ಧ ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ

PC | @ACBofficials
ಲಾಹೋರ್ : ಇಲ್ಲಿನ ಗದ್ದಾಫಿ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿಯ 10ನೇ ಪಂದ್ಯದಲ್ಲಿ ಆಸ್ಟ್ರೇಲಿಯ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಅಫ್ಘಾನಿಸ್ತಾನದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಸೆಮಿ ಫೈನಲ್ ಗೇರುವ ವಿಶ್ವಾಸವನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಅಫ್ಘಾನಿಸ್ತಾನ ತಂಡಕ್ಕೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವು ಗೆಲುವು ದಾಖಲಿಸಿದರೆ, ಅಂತಿಮ-4ರಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.
Next Story