ಐಸಿಸಿ ಟಿ-20 ರ್ಯಾಂಕಿಂಗ್: ಆಲ್ರೌಂಡರ್ ಪಟ್ಟಿಯಲ್ಲಿ ಹಾರ್ದಿಕ್ಗೆ ಅಗ್ರ ಸ್ಥಾನ

ಹಾರ್ದಿಕ್ ಪಾಂಡ್ಯ | PC : PTI
ಹೊಸದಿಲ್ಲಿ: ಭಾರತದ ಹಾರ್ದಿಕ್ ಪಾಂಡ್ಯ ಬುಧವಾರ ಐಸಿಸಿ ಬಿಡುಗಡೆ ಮಾಡಿರುವ ರ್ಯಾಂಕಿಂಗ್ ನಲ್ಲಿ ಟಿ-20 ಆಲ್ರೌಂಡರ್ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ, ಸ್ಪಿನ್ನರ್ ವರುಣ್ ಚಕ್ರವರ್ತಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಐಸಿಸಿ ಟಿ-20 ರ್ಯಾಂಕಿಂಗ್ ನಲ್ಲಿ ಬೌಲರ್ಗಳ ಪೈಕಿ ವರುಣ್ ಚಕ್ರವರ್ತಿ 706 ಪಾಯಿಂಟ್ಸ್ನೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ನ್ಯೂಝಿಲ್ಯಾಂಡ್ನ ಜೇಕಬ್ ಡಫಿ(723 ಅಂಕ) ಹಾಗೂ ವೆಸ್ಟ್ಇಂಡೀಸ್ನ ಅಕೀಲ್ ಹುಸೇನ್ ಮೊದಲೆರಡು ಸ್ಥಾನದಲ್ಲಿದ್ದಾರೆ. ರವಿ ಬಿಷ್ಣೋಯ್ 7ನೇ, ಅರ್ಷದೀಪ್ ಸಿಂಗ್(653 ಅಂಕ) 10ನೇ ಹಾಗೂ ಅಕ್ಷರ್ ಪಟೇಲ್ 13ನೇ ಸ್ಥಾನದಲ್ಲಿದ್ದಾರೆ.
ಬ್ಯಾಟರ್ಗಳ ರ್ಯಾಂಕಿಂಗ್ ನಲ್ಲಿ ಯುವ ಎಡಗೈ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ 2ನೇ ಸ್ಥಾನದಲ್ಲಿ ಮುಂದುವರಿದರೆ, ತಿಲಕ್ ವರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಕ್ರಮವಾಗಿ 4ನೇ ಹಾಗೂ 5ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ಟ್ರಾವಿಸ್ ಹೆಡ್ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ನ ಫಿಲ್ ಸಾಲ್ಟ್ 3ನೇ ಸ್ಥಾನದಲ್ಲಿದ್ದಾರೆ.
ಆಲ್ರೌಂಡರ್ಗಳ ರ್ಯಾಂಕಿಂಗ್ನಲ್ಲಿ 252 ಅಂಕದೊಂದಿಗೆ ಹಾರ್ದಿಕ್ ಪಾಂಡ್ಯ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ನೇಪಾಳದ ದೀಪೇಂದ್ರ ಸಿಂಗ್ ಹಾಗೂ ಆಸ್ಟ್ರೇಲಿಯದ ಮಾರ್ಕಸ್ ಸ್ಟೋಯಿನಿಸ್ 2ನೇ ಹಾಗೂ 3ನೇ ಸ್ಥಾನದಲ್ಲಿದ್ದಾರೆ.