ಸ್ಟಾರ್ಕ್ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ; 180 ರನ್ ಗೆ ಆಲೌಟ್
Photo: PTI
ಅಡಿಲೇಡ್: ಇಲ್ಲಿನ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯ ತಂಡಗಳ ನಡುವಿನ ಎರಡನೆ ಟೆಸ್ಟ್ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ 180 ರನ್ಗಳಿಗೆ ಆಲೌಟ್ ಆಗಿದೆ.
ಪಂದ್ಯದ ಮೊದಲ ಎಸೆತದಲ್ಲೇ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮಿಚೆಲ್ ಸ್ಟಾರ್ಕ್ ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ನಂತರ ಕೆಎಲ್ ರಾಹುಲ್ (37) ಮತ್ತು ಶುಭ್ಮನ್ ಗಿಲ್ (31) ಅರ್ಧ ಶತಕದ ಜೊತೆಯಾಟ ನಡೆಸಿದರು. ಕೊನೆಯಲ್ಲಿ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ 42 ರನ್ ಗಳಿಸಿ ತಂಡ 150 ರನ್ ಗಡಿದಾಟುವಲ್ಲಿ ಸಹಕಾರಿಯಾದರು.
ಮಿಚೆಲ್ ಸ್ಟಾರ್ಕ್ 6 ವಿಕೆಟ್ ಪಡೆದು ಮಿಂಚಿದರು.
Next Story