ಆರಂಭಿಕ ಆಘಾತದ ಹೊರತಾಗಿಯೂ ಚೇತರಿಸಿಕೊಂಡ ಭಾರತ
ವಿಶ್ವಕಪ್ : ಇಂಗ್ಲೆಂಡ್ ವಿರುದ್ಧ 137ಕ್ಕೆ 4 ವಿಕೆಟ್ ಪತನ
Photo: cricketworldcup.com
ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿತ್ತು. ಆದರೆ, ನಾಯಕ ರೋಹಿತ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಚೇತರಿಸಿಕೊಂಡಿತು.
ಭಾರತದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು. ಇತ್ತ ಬ್ಯಾಟಿಂಗ್ ಗೆ ಬಂದ ಭಾರತ 11.5 ಓವರ್ ಕಳೆಯುವಷ್ಟರಲ್ಲಿ ತನ್ನ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಆಘಾತ ಎದುರಿಸಿತು. ಭಾರತದ ಬ್ಯಾಟಿಂಗ ಬಲಗಳಾದ ಶುಬ್ ಮನ್ ಗಿಲ್ (9 ) ಶ್ರೇಯಸ್ ಐಯ್ಯರ್ (4) ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಕೆ ಎಲ್ ರಾಹುಲ್ 39 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈಗ ನಾಯಕ ರೋಹಿತ್ ಶರ್ಮಾ 79 ಗಳಿಸಿ ಕ್ರೀಸ್ ನಲ್ಲಿದ್ದಾರೆ. ಸೂರ್ಯ ಕುಮಾರ್ ಯಾದವ್ 5 ರನ್ ಗಳೊಂದಿಗೆ ಅಜೇಯರಾಗಿದ್ದಾರೆ.
Next Story