ಭಾರತ-ಇಂಗ್ಲೆಂಡ್ ಪ್ರಥಮ ಏಕದಿನ ಪಂದ್ಯ | ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್

Photo:X/BCCI
ವಿದರ್ಭ: ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್, ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಐದು ಪಂದ್ಯಗಳ ಟಿ-20 ಸರಣಿಯಲ್ಲಿ 4-1ರ ಅಂತರದಲ್ಲಿ ಹೀನಾಯವಾಗಿ ಪರಾಭವಗೊಂಡ ನಂತರ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪುಟಿದೇಳುವ ಸನ್ನಾಹದಲ್ಲಿ ಇಂಗ್ಲೆಂಡ್ ತಂಡವಿದೆ.
ಈ ಏಕಪಂದ್ಯದ ಮೂಲಕ ಮತ್ತೆ ಭಾರತ ತಂಡದ ನಾಯಕರಾಗಿ ಮರಳಿರುವ ರೋಹಿತ್ ಶರ್ಮ, ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ನಿರೂಪಿಸಬೇಕಾದ ಒತ್ತಡದಲ್ಲಿದ್ದಾರೆ.
ಭಾರತ:
ರೋಹಿತ್ ಶರ್ಮ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇ ಯಸ್ ಅಯ್ಯರ್, ಶುಭಮನ್ ಗಿಲ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮುಹಮ್ಮದ್ ಶಮಿ
ಇಂಗ್ಲೆಂಡ್:
ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್ ಸ್ಟನ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್