ಸಿಡ್ನಿ ಟೆಸ್ಟ್ | ಜಸ್ಪ್ರೀತ್ ಬುಮ್ರಾಗೆ ಗಾಯ , ಟೀಂ ಇಂಡಿಯಾ ನಾಯಕನಾಗಿ ಕೊಹ್ಲಿ
Photo | hindustantimes
ಹೊಸದಿಲ್ಲಿ: ಸಿಡ್ನಿಯಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದನೇ ಮತ್ತು ಅಂತಿಮ ಟೆಸ್ಟ್ ನ 2ನೇ ದಿನದಂದು ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನವನ್ನು ತೊರೆದಿದ್ದು. ವಿರಾಟ್ ಕೊಹ್ಲಿ ನಾಯಕನಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮೇಲ್ನೋಟಕ್ಕೆ ಜಸ್ಪ್ರೀತ್ ಬುಮ್ರಾ ಅವರಿಗೆ ಗಾಯಗಳಾಗಿದೆ ಎಂದು ಹೇಳಲಾಗಿದೆ. ಆದರೆ ಗಾಯದ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ ವಿಶ್ವದ ನಂ.1 ವೇಗದ ಬೌಲರ್ ಸ್ಕ್ಯಾನಿಂಗ್ ಮಾಡಲು ವೈದ್ಯರ ಜೊತೆಗೆ ಸಿಡ್ನಿಯಲ್ಲಿರುವ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ದ್ವಿತೀಯ ದಿನದಾಟದ ಭೋಜನಾ ವಿರಾಮಕ್ಕೆ ಸ್ವಲ್ಪ ಮೊದಲು ಜಸ್ಪ್ರೀತ್ ಬುಮ್ರಾ ಮೈದಾನದಿಂದ ಹೊರ ನಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ನಾಯಕರಾಗಿ ವಿರಾಟ್ ಕೊಹ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ವರ್ಷಗಳ ಬಳಿಕ ಕಿಂಗ್ ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ.
ಮೈದಾನದಿಂದ ಹೊರಡುವ ಮೊದಲು, ಬುಮ್ರಾ ಅವರು ಕೊಹ್ಲಿಯೊಂದಿಗೆ ಕೆಲ ಹೊತ್ತು ಮಾತನಾಡುತ್ತಿರುವುದು ಕೂಡ ಕಂಡು ಬಂದಿದೆ.