ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಮರಳಿದ ಎಂ ಎಸ್ ಧೋನಿ

ಮಹೇಂದ್ರ ಸಿಂಗ್ ಧೋನಿ | PC ; NDTV
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಮಹೇಂದ್ರ ಸಿಂಗ್ ಧೋನಿ ಮರಳಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಸಿಎಸ್ಕೆ ತಂಡಕ್ಕೆ ತೀವ್ರ ಹಿನ್ನಡೆಯಾದ ನಂತರ, ಐಪಿಎಲ್ 2025 ರ ಉಳಿದ ಅವಧಿಗೆ ಧೋನಿ ತಂಡವನ್ನು ಮುನ್ನಡೆಸಲಿದ್ದಾರೆ.
ಸಿ ಎಸ್ ಕೆ ನಾಯಕನಾಗಿದ್ದ ಋತುರಾಜ್ ಗಾಯಕ್ವಾಡ್ ರ ಮೊಣಕೈಗೆ ಗಾಯವಾಗಿರುವ ಕಾರಣ ಅವರು ಐಪಿಎಲ್ ನಿಂದ ಹೊರಗುಳಿಯಲಿದ್ದಾರೆ. ಟೂರ್ನಿಯ ಉಳಿದ ಅವಧಿಗೆ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿ ಎಸ್ ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.
ಸಿ ಎಸ್ ಕೆ ತಂಡವನ್ನು ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿ ಮುನ್ನಡೆಸಿದ ಧೋನಿ, ಶುಕ್ರವಾರ ಚೆನ್ನೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ ಪಂದ್ಯದೊಂದಿಗೆ ಕ್ಯಾಪ್ಟನ್ ಆಗಿ ಮರಳಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2025 ರಲ್ಲಿ ಐದು ಪಂದ್ಯಗಳಲ್ಲಿ, ಸಿ ಎಸ್ ಕೆ ನಾಲ್ಕು ಪಂದ್ಯಗಳಲ್ಲಿ ಸೋತು 10 ತಂಡಗಳ ಐಪಿಎಲ್ 2025 ರ ಪಟ್ಟಿಯಲ್ಲಿ ಒಂಭತ್ತನೇ ಸ್ಥಾನದಲ್ಲಿದೆ.