ಚಾಂಪಿಯನ್ಸ್ ಟ್ರೋಫಿ | ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ನ್ಯೂಝಿಲೆಂಡ್ ಬ್ಯಾಟಿಂಗ್ ಆಯ್ಕೆ

Photo credit:X/@ICC
ಲಾಹೋರ್: ಇಲ್ಲಿನ ಗದ್ದಾಫಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ಗೆದ್ದ ತಂಡವು, ಮಂಗಳವಾರ ನಡೆದ ಮೊದಲ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ ತಂಡವನ್ನು ರವಿವಾರ ದುಬೈನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ಎದುರಿಸಲಿದೆ.
Next Story