ದ್ವಿತೀಯ ಏಕದಿನ ಪಂದ್ಯ | ಭಾರತಕ್ಕೆ 304 ರನ್ಗಳ ಗುರಿ ನೀಡಿದ ಇಂಗ್ಲೆಂಡ್

PC | x@BCCI
ಕಟಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತಕ್ಕೆ ಇಂಗ್ಲೆಂಡ್ 304 ರನ್ಗಳ ಗುರಿ ನೀಡಿದೆ.
ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.
ಇನ್ನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಮತ್ತು ಬೆನ್ ಡಕೆಟ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಹತ್ತನೇ ಓವರ್ಗೆ ಫಿಲ್ ಸಾಲ್ಟ್ 29 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 26 ರನ್ ಗಳಿಸಿದ್ದಾಗ, ವರುಣ್ ಚಕ್ರವರ್ತಿಗೆ ಮೊದಲ ವಿಕೆಟ್ ಒಪ್ಪಿಸಿದರು. ಬೆನ್ ಡಕೆಟ್ 56 ಎಸೆತಗಳಲ್ಲಿ ಹತ್ತು ಬೌಂಡರಿ ನೆರವಿನಿಂದ 65 ರನ್ ಬಾರಿಸಿ ರವೀಂದ್ರ ಜಡೇಜಾ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯಗೆ ಕ್ಯಾಚ್ ನೀಡಿ ಔಟಾದರು.
ನಂತರದ ಕ್ರಮಾಂಕದಲ್ಲಿ ಬಂದ ಹ್ಯಾರಿ ಬ್ರೂಕ್ 52 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಜೋಸ್ ಬಟ್ಲರ್ 35 ಎಸೆತಗಳಲ್ಲಿ 34 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಜೋ ರೂಟ್ ಉತ್ತಮ ಪ್ರದರ್ಶನ ಇಂಗ್ಲೆಂಡ್ ಗೆ ಆಸರೆಯಾಯಿತು. ಆದರೆ 42.3 ನೇ ಬಾಲ್ಗೆ 72 ಎಸೆತಗಳಲ್ಲಿ 4 ಬೌಂಡರಿ ನೆರವಿನಿಂದ 69 ರನ್ ಗಳಿಸಿದ್ದಾಗ ಅವರು ರವೀಂದ್ರ ಜಡೇಜಾ ಬೌಲಿಗೆ ಕೊಯ್ಲಿಗೆ ಕ್ಯಾಚ್ ನೀಡಿ ಔಟಾದರು. ಲಿಯಾಮ್ ಲಿವಿಂಗ್ಸ್ಟೋನ್ 32 ಎಸೆತಗಳಲ್ಲಿ 42 ರನ್ ಗಳಿಸಿ ರನ್ ಔಟಾದರು.
ನಂತರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಆಟಗಾರರು ಯಾವುದೇ ಉತ್ತಮ ಪ್ರದರ್ಶನ ನೀಡಲಿಲ್ಲ. ಇಂಗ್ಲೆಂಡ್ ತಂಡವು 49.5 ಓವರ್ ನಲ್ಲಿಆಲ್ ಔಟಾಯಿತು.
ಭಾರತದ ಬೌಲರ್ ಗಳಾದ ರವೀಂದ್ರ ಜಡೇಜಾ 3 ವಿಕೆಟ್ ಪಡೆದರೆ, ಮುಹಮ್ಮದ್ ಶಮಿ, ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ತಲಾ ಒಂದು ವಿಕೆಟ್ ಪಡೆದರು.