2023-24 ನೇ ಸಾಲಿನ ಗುತ್ತಿಗೆ ಒಪ್ಪಂದ ಪಟ್ಟಿ ಪ್ರಕಟ : ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಕೈಬಿಟ್ಟ ಬಿಸಿಸಿಐ
Photo : NDTV
ಮುಂಬೈ : 2023-24ರ ಕೇಂದ್ರೀಯ ಒಪ್ಪಂದಗಳ ಪಟ್ಟಿಯನ್ನು ಬಿಸಿಸಿಐ ಆಯ್ಕೆ ಸಮಿತಿಯು ಬುಧವಾರ ಪ್ರಕಟಿಸಿದ್ದು, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಅವರನ್ನು ಗ್ರೇಡ್ ಎ+ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಆರ್ ಅಶ್ವಿನ್, ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್, ಕೆ ಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಗ್ರೇಡ್ ಎ ಪಟ್ಟಿಯಲ್ಲಿ ಸೇರಿಸಲಾಗಿದೆ.
ಗ್ರೇಡ್ ಬಿ ಪಟ್ಟಿಯಲ್ಲಿ ಸೂರ್ಯ ಕುಮಾರ್ ಯಾದವ್, ರಿಷಬ್ ಪಂಥ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್ ಸ್ಥಾನ ಪಡೆದಿದ್ದಾರೆ. ಗ್ರೇಡ್ ಸಿ ಪಟ್ಟಿಯಲ್ಲಿ ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ ಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್ ಅವರಿಗೆ ಸ್ಥಾನ ನೀಡಲಾಗಿದೆ.
ಇದಲ್ಲದೇ ಆಯ್ಕೆ ಸಮಿತಿಯು ವೇಗದ ಬೌಲಿಂಗ್ ಒಪ್ಪಂದಗಳಿಗಾಗಿ ಆಕಾಶ್ ದೀಪ್, ವಿಜಯ್ ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರ ಹೆಸರನ್ನು ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ.