ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ಆಸ್ಟ್ರೇಲಿಯ ತಂಡ ಪ್ರಕಟ, ಸ್ಮಿತ್ ನಾಯಕ
ಸ್ಮಿತ್ | PTI
ಮೆಲ್ಬರ್ನ್: ಖಾಯಂ ನಾಯಕ ಪ್ಯಾಟ್ ಕಮಿನ್ಸ್ ವೈಯಕ್ತಿಕ ಕಾರಣಕ್ಕೆ ವಿಶ್ರಾಂತಿಯಲ್ಲಿರುವ ಕಾರಣ ಸ್ಟೀವ್ ಸ್ಮಿತ್ ಶ್ರೀಲಂಕಾ ಕ್ರಿಕೆಟ್ ಪ್ರವಾಸದಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯ(ಸಿಎ)ಗುರುವಾರ ಪ್ರಕಟಿಸಿದೆ.
ಆಸ್ಟ್ರೇಲಿಯ ತಂಡ ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು 3-1 ಅಂತರದಿಂದ ಗೆದ್ದ ನಂತರ ತಂಡವನ್ನು ಪ್ರಕಟಿಸಲಾಗಿದೆ. ಮೊಣಕಾಲು ನೋವು ಕಾಡಿದರೂ ಕಮಿನ್ಸ್ ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ್ದರು. ವೇಗದ ಬೌಲರ್ ಜೋಶ್ ಹೇಝಲ್ವುಡ್ ಕೂಡ ಗಾಯದ ಸಮಸ್ಯೆಗೆ ಒಳಗಾಗಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನದಲ್ಲಿ ನಡೆಯಲಿರುವ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಮನ ಹರಿಸಲು ಮಿಚೆಲ್ ಮಾರ್ಷ್ ತಂಡದಿಂದ ಹೊರಗುಳಿದಿದ್ದಾರೆ.
ಆಸ್ಟ್ರೇಲಿಯದ ಆಯ್ಕೆದಾರರು ಎರಡು ಟೆಸ್ಟ್ ಪಂದ್ಯಗಳಿಗೆ ಸ್ಪಿನ್ನರ್ಗೆ ಮಣೆ ಹಾಕಿದ್ದು, 21ರ ಹರೆಯದ ಹೊಸ ಆಟಗಾರ ಕೂಪರ್ ಕೊನೊಲ್ಲಿ ಅವಕಾಶ ಪಡೆದಿದ್ದಾರೆ.
ಆಸ್ಟ್ರೇಲಿಯದ ಶ್ರೀಲಂಕಾ ಕ್ರಿಕೆಟ್ ಪ್ರವಾಸವು ಜನವರಿ 29ರಿಂದ ಆರಂಭವಾಗಿ ಫೆಬ್ರವರಿ 6ರ ತನಕ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳು, ಆ ನಂತರ ಏಕೈಕ ಏಕದಿನ ಪಂದ್ಯ(ಫೆ.13) ಒಳಗೊಂಡಿದೆ.
► ಶ್ರೀಲಂಕಾ ಪ್ರವಾಸಕ್ಕೆ ಆಸ್ಟ್ರೇಲಿಯ ಕ್ರಿಕೆಟ್ ತಂಡ:
ಸ್ಟೀವ್ ಸ್ಮಿತ್(ನಾಯಕ), ಸೀನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲ್ಲಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಸ್ಯಾಮ್ ಕಾನ್ಸ್ಟಾಸ್, ಮ್ಯಾಟ್ ಕುಹ್ನೆಮನ್, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯೊನ್, ನಾಥನ್ ಮೆಕ್ಸ್ವೀನಿ, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್ಸ್ಟರ್.