ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತಿದ್ದೇನೆ : ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್
PC: x.com/alliseeisgold
ಹೊಸದಿಲ್ಲಿ : 100 ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕೆ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್ನಿಂದ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ.
‘ಎಕ್ಸ್’ನಲ್ಲಿ ನಿವೃತ್ತಿ ಘೋಷಿಸಿ ಫೋಸ್ಟ್ ಮಾಡಿರುವ ಅವರು, ‘ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತು ನನ್ನ ಧೈರ್ಯ ನುಚ್ಚುನೂರಾಗಿದೆ. ಈಗ ನನಗೆ ಹೆಚ್ಚಿನ ಶಕ್ತಿ ಇಲ್ಲ. ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ’ ಎಂದು ತಿಳಿಸಿದ್ದಾರೆ.
Next Story