ಮಹಿಳೆಯರ ಟಿ20 ವಿಶ್ವಕಪ್ ಬಾಂಗ್ಲಾದೇಶದಿಂದ ಸ್ಥಳಾಂತರ ಸಾಧ್ಯತೆ
PC : ICC
ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ರಾಜಕೀಯ ಉದ್ವಿಗ್ನತೆ ನೆಲೆಸಿರುವಾಗಲೇ ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ಮುಂಬರುವ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯನ್ನು ಬೇರಡೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ಕ್ರಿಕ್ಬಝ್ ವರದಿ ಮಾಡಿದೆ.
ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯು ಮಂಗಳವಾರ ವರ್ಚುವಲ್ ಆಗಿ ಮಂಡಳಿಯ ಸಭೆ ನಡೆಸಿದೆ. ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ.
ಟಿ20 ವಿಶ್ವಕಪ್ ಟೂರ್ನಮೆಂಟ್ ಅಕ್ಟೋಬರ್ 3ರಿಂದ 20ರ ತನಕ ನಡೆಯಲಿದೆ.
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಪಂದ್ಯಾವಳಿಯನ್ನು ಸ್ಥಳಾಂತರಿಸಲು ಒಪ್ಪಿಕೊಂಡಿದ್ದು ಆದರೆ ಅದು ಪಂದ್ಯಾವಳಿಯ ಅಧಿಕೃತ ಆತಿಥೇಯ ತಂಡವಾಗಿಯೇ ಮುಂದುವರಿಯಲಿದೆ.
Next Story