ಪ್ಯಾರಿಸ್ ಒಲಿಂಪಿಕ್ಸ್: ಕುಸ್ತಿಯಲ್ಲಿ ಹಾಲಿ ಚಾಂಪಿಯನ್ ಅನ್ನು ಮಣಿಸಿ ಕ್ವಾರ್ಟರ್ಫೈನಲ್ ಪ್ರವೇಶಿಸಿದ ವಿನೇಶ್ ಫೋಗಟ್
ಜಾವೆಲಿನ್ ಎಸೆತದಲ್ಲಿ ಫೈನಲ್ ಪ್ರವೇಶಿಸಿದ ನೀರಜ್ ಚೋಪ್ರಾ
Photo:X/@JioCinema
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ವಿನೇಶ್ ಫೋಗಟ್ ಅವರು ವರ್ಲ್ಡ್ ನಂ. 1 ಮತ್ತು ಹಾಲಿ ಒಲಿಂಪಿಕ್ ಚಾಂಪಿಯನ್ ಜಪಾನ್ನ ಯುಯಿ ಸುಸಕಿ ಅವರನ್ನು ಮಣಿಸಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ಕುಸ್ತಿ ಸ್ಪರ್ಧೆಯಲ್ಲಿ ಕ್ವಾರ್ಟರ್ಫೈನಲ್ ಪ್ರವೇಶಿಸಿ ಭಾರತದ ಪಾಲಿಗೆ ಇನ್ನೊಂದು ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.
ವಿನೇಶ್ ಅವರು 0-2 ಅಂತರದಲ್ಲಿ ಕಳೆದ ಬಾರಿಯ ಚಿನ್ನದ ಪದಕ ವಿಜೇತೆ ಟೋಕಿಯೋದ ಯುಯಿ ಅವರನ್ನು ಮಣಿಸಿ ಕ್ವಾರ್ಟರ್ ಫೈನಲ್ನಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನೊಂದೆಡೆ ಭಾರತದ “ಗೋಲ್ಡನ್ ಬಾಯ್” ನೀರಜ್ ಚೋಪ್ರಾ ಅವರು ಇಂದು ಪುರುಷರ ಜಾವೆಲಿನ್ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಲಿದ್ದಾರೆ. ಮೊದಲ ಪ್ರಯತ್ನದಲ್ಲೇ 89.34 ಮೀಟರ್ ದೂರ ಎಸೆದು ಫೈನಲ್ ಪ್ರವೇಶಿಸಿದ್ದಾರೆ.
Next Story