ರಾಜ್ಯದಲ್ಲಿ 229 ಕೊರೋನ ಸೋಂಕು ಪ್ರಕರಣ ದೃಢ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ರವಿವಾರ 229 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 62 ಜನರು ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 3,527 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 22 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1ಸಾವಿರಕ್ಕೆ ಏರಿಕೆಯಾಗಿದೆ. ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಸೋಂಕಿನ ಪಾಸಿಟಿವಿಟಿ ದರ ಶೇ.6.49ರಷ್ಟು ದಾಖಲಾಗಿದೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 229 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 4, ಬೆಳಗಾವಿ 1, ಬೆಂಗಳೂರು ಗ್ರಾಮಂತರ 9, ಬೆಂಗಳೂರು ನಗರ 64, ಚಾಮರಾಜನಗರ 12, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 5, ಚಿತ್ರದುರ್ಗ 4, ದಕ್ಷಿಣ ಕನ್ನಡ 10, ದಾವಣಗೆರೆ 5, ಧಾರವಾಡ 2, ಗದಗ 4, ಹಾಸನ 12, ಕಲಬುರಗಿ 5, ಕೋಲಾರ 3, ಕೊಪ್ಪಳ 5, ಮಂಡ್ಯ 22, ಮೈಸೂರು 26, ರಾಯಚೂರು 3, ರಾಮನಗರ 30, ಶಿವಮೊಗ್ಗ 4, ಉತ್ತರ ಕನ್ನಡ 5, ವಿಜಯನಗರ ಜಿಲ್ಲೆಯಲ್ಲಿ 9 ಪ್ರಕರಣ ಪತ್ತೆಯಾಗಿವೆ.