ನೇಕಾರರಿಗೆ ಮಾಸಿಕ 250 ಯುನಿಟ್ ವಿದ್ಯುತ್ ಉಚಿತ: ರಾಜ್ಯ ಸರಕಾರ ಆದೇಶ
ಬೆಂಗಳೂರು, ಅ. 21: ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರರಿಗೆ 10 ಎಚ್‍ಪಿಯ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿ ಸರಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಈ ಆದೇಶ ಜಾರಿಯಾಗಿದ್ದು, ನೇಕಾರರು ಬಳಸುವ 10 ಯೂನಿಟ್ ವರೆಗೆ ಯಾವುದೇ ಶುಲ್ಕ ವಿಧಿಸದಿರಲು ತೀರ್ಮಾನಿಸಲಾಗಿದೆ. ಆಗಸ್ಟ್ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಕುರಿತು ಸಭೆ ನಡೆಸಿ ಉಚಿತ ವಿದ್ಯುತ್ ಯೋಜನೆ ಜಾರಿಗೆ ತರುವಂತೆ ಸೂಚಿಸಿದ್ದರು. ಜೊತೆಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಕಾರ್ಯಕ್ರಮವನ್ನು ಘೋಷಿಸಲಾಗಿತ್ತು.
10 ಎಚ್‍ಪಿ ವರೆಗೆ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಮಾಸಿಕ 250 ಯೂನಿಟ್‍ಗಳ ವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ ನೇಕಾರರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಕ್ರಮ ವಹಿಸಲಾಗುವುದು ಎಂದು ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ.
Next Story