ರಾಜ್ಯದಲ್ಲಿ 296 ಕೊರೋನ ಪ್ರಕರಣ ದೃಢ
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 296 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, ಒಬ್ಬ ಸೋಂಕಿಗೆ ಬಲಿಯಾಗಿದ್ದಾನೆ. 50 ಜನರು ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 5,021 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 20 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1245 ಕ್ಕೆ ಏರಿಕೆಯಾಗಿದೆ. ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಸೋಂಕಿನ ಪಾಸಿಟಿವಿಟಿ ದರ ಶೇ. 5.89ರಷ್ಟು ದಾಖಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಒಬ್ಬ ಸೋಂಕಿಗೆ ಒಬ್ಬ ಬಲಿಯಾಗಿದ್ದಾನೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 296 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 3, ಬಳ್ಳಾರಿ 11, ಬೆಳಗಾವಿ 2, ಬೆಂಗಳೂರು ಗ್ರಾಮಂತರ 5, ಬೆಂಗಳೂರು ನಗರ 131, ಬೀದರ್ 2, ಚಾಮರಾಜನಗರ 5, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 13, ದಾವಣಗೆರೆ 4, ಧಾರವಾಡ 4, ಗದಗ 6, ಹಾಸನ 17, ಕಲಬುರಗಿ 4, ಕೋಲಾರ 7, ಕೊಪ್ಪಳ 4, ಮಂಡ್ಯ 9, ಮೈಸೂರು 29, ರಾಯಚೂರು 1, ರಾಮನಗರ 1, ಶಿವಮೊಗ್ಗ 7, ತುಮಕೂರು 16, ಉಡುಪಿ 1, ವಿಜಯನಗರ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿವೆ.