2ನೇ ಪೊಕ್ಸೊ ಪ್ರಕರಣ: ಮುರುಘಾ ಶ್ರೀಗೆ ಡಿ.2ರವರೆಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ: ಎರಡನೇ ಪೊಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಡಿ.2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಈ ಆದೇಶ ಹೊರಡಿಸಿದರು.
ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು(ಸೋಮವಾರ) ಜಾಮೀನು ರಹಿತ ಬಂಧನದ ವಾರೆಂಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ವಿರಕ್ತಮಠದಲ್ಲಿದ್ದ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಚಿತ್ರದುರ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
Next Story