Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ವಾಡಿಕೆಗಿಂತ ಶೇ.78ರಷ್ಟು...

ರಾಜ್ಯದಲ್ಲಿ ವಾಡಿಕೆಗಿಂತ ಶೇ.78ರಷ್ಟು ಹೆಚ್ಚು ಮಳೆ: ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ10 Jun 2024 9:34 PM IST
share
ರಾಜ್ಯದಲ್ಲಿ ವಾಡಿಕೆಗಿಂತ ಶೇ.78ರಷ್ಟು ಹೆಚ್ಚು ಮಳೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಜೂ.2ರಂದು ಮುಂಗಾರು ಪ್ರವೇಶ ಮಾಡಿದೆ. 10 ದಿನಗಳ ಅವಧಿಯಲ್ಲಿ ವಾಡಿಕೆ ಪ್ರಕಾರ 51 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಈಗಾಗಲೆ 91 ಮಿ.ಮೀ. ಆಗಿದೆ. ಇದು ವಾಡಿಕೆಗಿಂತ ಶೇ.78ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಬರ ವಿಚಾರಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 9 ಮಿ.ಮೀ. ಮಳೆಯಾಗಿತ್ತು ಎಂದರು.

ಮುಂಗಾರು ರಾಜ್ಯದ ಎಲ್ಲ ಭಾಗಗಳಲ್ಲೂ ಆವರಿಸಿದೆ. 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. 22 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆಯಾಗಿದೆ. ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಮೇ ತಿಂಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದ ಹಳ್ಳಿಗಳ ಸಂಖ್ಯೆ 542 ಇತ್ತು. ಈಗ ಅದು 374ಕ್ಕೆ ಇಳಿದಿದೆ. ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಕೇಂದ್ರ ಸರಕಾರದ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ ನ್ಯಾಯಾಂಗ ಹೋರಾಟ ಮಾಡಿದ ಬಳಿಕ ನಮಗೆ 3454 ಕೋಟಿ ರೂ. ಬರ ಪರಿಹಾರ ಬಂದಿದೆ. ಈಗಾಗಲೆ 27.5 ಲಕ್ಷ ರೈತರಿಗೆ ಮೇ ಮೊದಲ ವಾರದಲ್ಲಿ 2451 ಕೋಟಿ ರೂ.ಪರಿಹಾರ ನೀಡಿದ್ದೇವೆ. ನಾಲೆಗಳ ಮೂಲಕ ನೀರು ಬರದೆ ಬೆಳೆಹಾನಿ ಅನುಭವಿಸಿದಂತಹ ಸುಮಾರು 7 ಲಕ್ಷ ರೈತರಿಗೆ ಒಂದು ವಾರದಲ್ಲಿ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

17.09 ಲಕ್ಷ ಸಣ್ಣ, ಅತಿ ಸಣ್ಣ ರೈತ ಕುಟುಂಬಗಳಿಗೆ ತಲಾ 2800-3000 ರೂ.ಗಳಂತೆ ಜೀವನೋಪಾಯ ಪರಿಹಾರ ನೀಡಲಾಗುವುದು. ಇದಕ್ಕಾಗಿ ಎನ್‍ಡಿಆರ್‍ಎಫ್ ಅಡಿಯಲ್ಲಿ 232 ಕೋಟಿ ರೂ. ಹಾಗೂ ಎಸ್‍ಡಿಆರ್‍ಎಫ್ ಅಡಿಯಲ್ಲಿ ನಾವು 232 ಕೋಟಿ ರೂ.ಸೇರಿಸಿದೇವೆ. ಒಟ್ಟು 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್ ಹಗೂ ರಾಜ್ಯ ಸರಕಾರದ ಬಾಬತ್ತು ಸೇರಿ 4320 ಕೋಟಿ ರೂ., ಈಗಾಗಲೆ ಪಾವತಿಯಾಗಿರುವ ವಿಮೆ ಮೊತ್ತ 1654 ಕೋಟಿ ರೂ. ಹಾಗೂ ಇನ್ನೂ ಪಾವತಿಗೆ ಬಾಕಿಯಿರುವ 808 ಕೋಟಿ ರೂ.ಗಳನ್ನು ಪಾವತಿ ಮಾಡಿದರೆ ಸುಮಾರು 6 ಸಾವಿರ ಕೋಟಿ ರೂ.ಗಳಷ್ಟು ಪರಿಹಾರವನ್ನು ಕಳೆದ ವರ್ಷ ಬರಕ್ಕೆ ನೀಡಿದಂತಾಗುತ್ತದೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು.

ಪೂರ್ವ ಮುಂಗಾರಿಯಲ್ಲಿ ಶೇ.31ರಷ್ಟು ಹೆಚ್ಚು ಮಳೆ: ರಾಜ್ಯದಲ್ಲಿ ಪೂರ್ವ ಮುಂಗಾರಿನಲ್ಲಿ ಸಾಮಾನ್ಯವಾಗಿ 115 ಮಿ.ಮೀ. ಮಳೆಯಾಗುತ್ತದೆ. ಮೇ 31ಕ್ಕೆ ಮುಂಚಿತವಾಗಿ ಈ ಬಾರಿ 151 ಮಿ.ಮೀ. ಮಳೆಯಾಗಿದೆ. ಇದು ವಾಡಿಕೆಗಿಂತ ಶೇ.31ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X