Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು...

ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ ಏನು ?

ವಾರ್ತಾಭಾರತಿವಾರ್ತಾಭಾರತಿ8 Sept 2023 4:56 PM IST
share
ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರ ಬರೆದು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಾಳೆ.

ರಾಜ್ಯ ಸರಕಾರದ ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸರಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಬರೆದ ಪತ್ರವನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ʼʼಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತುʼʼ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ಪತ್ರದಲ್ಲಿ ಹೀಗಿದೆ....

ʼʼ2ನೇ ಬಾರಿಗೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ತಮ್ಮನ್ನು ಅಭಿನಂದಿಸುತ್ತೇನೆ. ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ದೊರಕಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ಮೊಟ್ಟೆ, ಹಾಲು ವಿತರಣೆ ಯೋಜನೆ ಅತ್ಯುತ್ತಮ ಯೋಜನೆಯಾಗಿದೆ. ಅಲ್ಲದೇ, ತಾವು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸುತ್ತೀರಿ ಎಂದು ಆಶಿಸುತ್ತಾ ತಮ್ಮಲ್ಲಿ ವಿಶೇಷವಾಗಿ ವಿನಂತಿಸುವುದೇನೆಂದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ತಾವು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕುʼʼ ಎಂದು ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾಳೆ.

ಸಿಎಂ ಪ್ರತಿಕ್ರಿಯೆ ಏನು?

ʼʼನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ʼʼಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ‌ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆʼʼ ಎಂದು ಅವರು ಟ್ವಿಟರ್‌ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X