ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ | ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜುಲೈ 18ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ನಗರದ 42ನೆ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಎಸ್‌ಐಟಿ ಕಸ್ಟಡಿ ದಿನ ಕೊನೆಗೊಂಡ ಕಾರಣಕ್ಕಾಗಿ ಸೂರಜ್ ರೇವಣ್ಣ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜುಲೈ 18ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ನಗರದ 42ನೆ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೊಂದೆಡೆ, ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು.4ರಂದು ನಡೆಯಲಿದ್ದು, ಆಕ್ಷೇಪಣೆ ಸಲ್ಲಿಸುವಂತೆಯೂ ಎಸ್‌ಐಟಿ ಪರ ವಕೀಲರಿಗೆ ಸೂಚನೆ ನೀಡಲಾಗಿದೆ.
ಪ್ರಕರಣ ಸಂಬಂಧ ಜೂ.23ರಂದು ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು, 7 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆನಂತರ, ಹೆಚ್ಚಿನ ವಿಚಾರಣೆ ಹಿನ್ನೆಲೆ ಕಸ್ಟಡಿ ಅವಧಿ 2 ದಿನಗಳ ಕಾಲ ವಿಸ್ತರಿಸಿ ಜುಲೈ 1ರಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿತ್ತು.