ಮೂರು ವಾಹನಗಳ ನಡುವೆ ಅಪಘಾತ
ಮಡಿಕೇರಿ ಜೂ.28 : ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಕುಶಾಲನಗರ ಸಮೀಪ ತಾವರೆಕೆರೆ ರಸ್ತೆಯಲ್ಲಿ ಬುಧವಾರ ನಡೆದಿದೆ.
ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಕಾರೊಂದಕ್ಕೆ ಲಾರಿಯೊಂದು ಹಿಂದಿನಿಂದ ಅಪ್ಪಳಿಸಿದ ಪರಿಣಾಮ ಎದುರುಗಡೆ ಹೋಗುತ್ತಿದ್ದ ಮತ್ತೊಂದು ಕಾರು ಕೂಡ ಜಖಂ ಗೊಂಡಿತು ಎಂದು ಹೇಳಲಾಗಿದೆ.
ಎರಡು ಕಾರುಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕುಶಾಲನಗರ ಸಂಚಾರ ಠಾಣೆ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿದರು.
Next Story