ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದೇ ಭ್ರಷ್ಟಾಚಾರ ಮುಕ್ತ ಆಡಳಿತ: ಕಾಂಗ್ರೆಸ್
ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಎನ್ನಲಾಗುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭಾರತ್ ಮಾಲಾ, ಆಯುಷ್ಮಾನ್ ಭಾರತ್ ಹಾಗೂ ಇನ್ನಿತರ ಹಲವು ಯೋಜನೆಗಳಲ್ಲಿ ನಡೆದ ಬೃಹತ್ ಭ್ರಷ್ಟಾಚಾರವನ್ನು ಹೊರಗೆಡವಿದ ಇಬ್ಬರು ಸಿಎಜಿ ಅಧಿಕಾರಿಗಳನ್ನು ಪ್ರಧಾನಿ ಮೋದಿ ಎತ್ತಂಗಡಿ ಮಾಡಿಸಿದ್ದಾರೆ.
"ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ" ಎಂದವರು ಈಗ "ತಿಂದಿದ್ದನ್ನು ಹೇಳಿದವರನ್ನು ಬಿಡುವುದಿಲ್ಲ" ಎಂದು ಬದಲಿಸಲಾಗಿದೆಯೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.
ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ
https://bit.ly/3tfd2Ro ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.
Next Story