ಆಯುಷ್ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್. ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ ಇಲಾಖೆಯಲ್ಲಿ ಮಂಜೂರಾದ 903 ವೈದ್ಯಾಧಿಕಾರಿಗಳ ಪೈಕಿ 677 ವೈದ್ಯಾಧಿಕಾರಿಗಳು ಮತ್ತು 158 ಸ್ನಾತಕೋತ್ತರ ಪದವಿ ಪಡೆದಿರುವ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಈಗಾಗಲೇ 726 ಚಿಕಿತ್ಸಾಲಯಗಳು, 168 ಆಸ್ಪತ್ರೆಗಳು 3 ಐವತ್ತು ಆಸಿಗೆಯುಳ್ಳ ಆಸ್ಪತ್ರೆಗಳು, ಒಂದು ಹೈ-ಟೆಕ್ ಪಂಚಕರ್ಮ ಆಸ್ಪತ್ರೆ ಹಾಗೂ 7 ಆಯುಷ್ ಕಾಲೇಜಿಗೆ ಹೊಂದಿಕೊಂಡ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲ ವಿಧಾನಸಭಾ ವ್ಯಾಪ್ತಿಯಲ್ಲಿ ಆಯುಷ್ ಆಸ್ಪತ್ರೆಗಳು ಇರುತ್ತವೆ ಎಂದರು.
Next Story