Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಗಮ ಮಂಡಳಿ ನೇಮಕದಲ್ಲಿ ಶಾಸಕರ...

ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನ: ಡಿಸಿಎಂ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ30 Dec 2023 1:54 PM IST
share
ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನ: ಡಿಸಿಎಂ ಡಿಕೆಶಿ

ಬೆಂಗಳೂರು: "ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು" ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, "ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿರುತ್ತಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು" ಎಂದು ತಿಳಿಸಿದರು.

"ಬಾಗಿಲಿಗೆ ಬಂತು ಸರಕಾರ" ಕಾರ್ಯಕ್ರಮ

"ಜನಸಾಮಾನ್ಯರು ತಮ್ಮ ಕಷ್ಟಗಳನ್ನು ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು, ಅವರ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದಿಲ್ಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಸಂಸದರು ಭಾಗವಹಿಸಲು ಆಹ್ವಾನ ನೀಡುತ್ತೇವೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಸಿದ್ಧತೆಗೆ ಜ. 10 ರಂದು ಸಭೆ:

"ಲೋಕಸಭೆ ಚುನಾವಣೆ ಸಿದ್ಧತೆ ವಿಚಾರವಾಗಿ ಜ.10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ" ಎಂದು ತಿಳಿಸಿದರು.

ಅಲ್ಪಸಂಖ್ಯಾತರಿಗೆ ನೆರವು, ಸಿಎಂ ನಿರ್ಧಾರದಲ್ಲಿ ತಪ್ಪೇನಿದೆ?:

ಅಲ್ಪಸಂಖ್ಯಾತರಿಗೆ ಒಂದು ಸಾವಿರ ಕೋಟಿ ರೂ. ಕ್ರಿಯಾಯೋಜನೆ ಬಗ್ಗೆ ಕೇಳಿದಾಗ, "ನಿಮ್ಮನ್ನು ರಾಮನಗರಕ್ಕೆ ಕರೆದುಕೊಂಡು ಹೋಗುತ್ತೇನೆ. ಅಲ್ಲಿ ಪ್ರವಾಹ ಪರಿಸ್ಥಿತಿ ಬಂದ ಪ್ರದೇಶದ ಸ್ಥಿತಿಗತಿ ಹೇಗಿದೆ ಎಂದು ಬಂದು ನೋಡಿ. ಅವರು ಹೇಗೆ ಬದುಕುತ್ತಿದ್ದಾರೆ ಎಂಬುದೇ ಆಶ್ಚರ್ಯ. ಜನರ ಬದುಕು ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ. 224 ಕ್ಷೇತ್ರಗಳಿಗೆ ಈ ಅನುದಾನ ಹಂಚಿದರೆ ಎಷ್ಟು ಸಿಗುತ್ತದೆ. ಹಳ್ಳಿಗಳಲ್ಲಿ ನರೇಗಾ ಯೋಜನೆ ಅವಕಾಶವಿದೆ. ಆದರೆ ಈ ಸಮುದಾಯ ಹೆಚ್ಚಾಗಿ ನಗರ ಪ್ರದೇಶದಲ್ಲಿ ವಾಸವಿದ್ದಾರೆ. ಹೀಗಾಗಿ ಅವರಿಗೆ ಹೆಚ್ಚು ಅವಕಾಶ ಇಲ್ಲ. ಅವರ ಪ್ರದೇಶ ಸ್ವಚ್ಛ ಮಾಡಿ, ಬದುಕು ಬದಲಿಸಬೇಕು ಎಂದು ಸಿಎಂ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X