ಜಾಹೀರಾತು ಪರಿಶೀಲನಾ ಸಮಿತಿ ರಚಿಸಿದ ರಾಜ್ಯ ಸರಕಾರ
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ, ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಜಾಹೀರಾತು ಪರಿಶೀಲನಾ ಸಮಿತಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ, ಹಿರಿಯ ಪತ್ರಕರ್ತ ನಾಹೀದ್ ಅತಾವುಲ್ಲಾ ಅವರನ್ನು ಸದಸ್ಯರನ್ನಾಗಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
Next Story