ಒಂದೂವರೆ ವರ್ಷದ ನಂತರ ಡಿ.ಕೆ ಶಿವಕುಮಾರ್ ಸಿಎಂ: ಶಾಸಕ ಇಕ್ಬಾಲ್ ಹುಸೇನ್
ರಾಮನಗರ: ‘ನಮ್ಮ ನಾಯಕರಾದ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದಕ್ಕೆ ಎಲ್ಲಾ ರೀತಿಯ ಅರ್ಹತೆ ಹೊಂದಿದ್ದಾರೆ. ಒಂದು ಅಥವಾ ಒಂದೂವರೆ ವರ್ಷದ ನಂತರ ಅವರು ಮುಖ್ಯಮಂತ್ರಿ ಆಗುತ್ತಾರೆʼ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಐದು ವರ್ಷ ನಾನೇ ಸಿ.ಎಂ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.
ʼʼಎಲ್ಲರಿಗೂ ಅವಕಾಶ ಸಿಗಬೇಕು. ಅವರಿಗೂ ಒಂದು ಅವಕಾಶ ಕೊಡಬೇಕು ಎಂದು ಸಾಕಷ್ಟು ನಾಯಕರು ಮತ್ತು ಕಾರ್ಯಕರ್ತರು ಸಹ ಆಸೆ ಇಟ್ಟುಕೊಂಡಿದ್ದಾರೆ. ಅವರನ್ನು ಸಿಎಂ ಆಗಿ ನೋಡುವುದು ನಮ್ಮ ಕನಸು. ಇದು ನಮ್ಮೆಲ್ಲರ ಅಭಿಲಾಷೆ ಕೂಡʼʼ ಎಂದು ಹೇಳಿದರು.
Next Story