ಅಮಿತ್ ಶಾ ಬಳಿಕ ಜೆ.ಪಿ.ನಡ್ಡಾರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ
ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು (ಬುಧವಾರ) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.
ವಿಧಾನ ಸಭೆ ಹಾಗೂ ಪರಿಷತ್ ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ರವಿವಾರ ದೆಹಲಿಗೆ ತೆರಳಿರುವ ಬೊಮ್ಮಾಯಿ ಅವರಿಗೆ ಸೋಮವಾರ ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿಲಿಲ್ಲ.
ಮಂಗಳವಾರ ಅಮಿತ್ ಶಾ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತು ಕತೆ ನಡೆಸಿದ್ದ ಬೊಮ್ಮಾಯಿ, ಇದೀಗ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾರೆ.
ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿರುವ ನಡುವೆಯೇ, ಬಸವರಾಜ ಬೊಮ್ಮಾಯಿ ಅವರು ವರಿಷ್ಠರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
Next Story