ಉಪ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇಮಕ : ವರದಿ
ಬಿ.ವೀರಪ್ಪ
ಬೆಂಗಳೂರು : ಕರ್ನಾಟಕ ಉಪ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಿಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.
ಕೋಲಾರದ ಶ್ರೀನಿವಾಸಪುರ ತಾಲೂಕಿನ ನಾಗದೇನಹಳ್ಳಿ ಗ್ರಾಮದ ವೀರಪ್ಪ ಅವರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ಅತಿ ಹೆಚ್ಚು ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಅಲ್ಲದೇ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ತಂದ ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರಕಾರ ಕ್ರಮದಲ್ಲಿ ವೀರಪ್ಪ ಅವರ ಪಾತ್ರ ಪ್ರಮುಖವಾಗಿತ್ತು.
ಕರ್ನಾಟಕ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿರುವ ವೀರಪ್ಪ ಅವರು ಈ ಹಿಂದೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದರು.
.
Next Story