Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಲಿತರ ಮೇಲಿನ ದೌರ್ಜನ್ಯಗಳು...

ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ: ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ21 Sept 2024 11:42 PM IST
share
ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ: ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು: NCRT ಪ್ರಕಾರ ದಲಿತರ ಮೇಲಿನ ದೌರ್ಜನ್ಯ 13.1ರಷ್ಟು ಹೆಚ್ಚಾಗಿವೆ ಹಾಗೂ ದಿನಕ್ಕೆ ಹತ್ತು ಜನ ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಈ ದೌರ್ಜನ್ಯ ಪ್ರಮಾಣ ಕಡಿಮೆಯಾಗಬೇಕಿತ್ತು, ಆದರೆ ಹೆಚ್ಚಾಗುತ್ತಿವೆ ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಚಿತ್ರಕಲಾ ಪರಿಷತ್‍ನಲ್ಲಿ ಕೌದಿ ಪ್ರಕಾಶನ ಮತ್ತು ತಮಟೆ ಮೀಡಿಯಾದ ಸಹಯೋಗದೊಂದಿಗೆ ಆಯೋಜಿಸಿದ್ದ ಕವಿ ಸುಬ್ಬು ಹೊಲೆಯಾರ್‍ರ ‘ದುಃಖ ಆರದ ನೆಲದಲ್ಲಿ’ ಲೇಖನಗಳ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿಗಷ್ಟೆ ಕೊಪ್ಪಳದಲ್ಲಿ ದಲಿತ ಹುಡುಗನನ್ನು ಹತ್ಯೆ ಮಾಡಲಾಗಿದೆ. ಬೌದ್ಧಿಕ ದಬ್ಬಾಳಿಕೆಯ ಜತೆಗೆ ದೈಹಿಕ ದಬ್ಬಾಳಿಕೆಯನ್ನೂ ನೋಡಿರುವ, ನೋಡುತ್ತಿರುವ ಸಮಾಜ ನಮ್ಮದು ಎಂದು ಹೇಳಿದರು.

ಹಿಂಸಾತ್ಮಕ ಭಾಷೆಗಳ ಬಳಕೆ ಹಾಗೂ ಭಾಷಿಕ ಭ್ರಷ್ಟಾಚಾರದ ಸಂದರ್ಭದಲ್ಲಿ ನಾವು ಇದ್ದೇವೆ. ನಿಜವಾದ ಕವಿ ಮನಸ್ಸು ಜನರನ್ನು ಕೂಡಿಸುವ ಕೆಲಸ ಮಾಡುತ್ತದೆ. ಸುಬ್ಬು ಹೊಲೆಯಾರ್ ಬರಹದ ಮೂಲಕ ಜನರನ್ನು ಕೂಡಿಸುತ್ತಿದ್ದಾರೆ. ಶತಮಾನಗಳಿಂದ ನಾವು ‘ದುಃಖ ಆರದ ನೆಲದಲ್ಲಿ’ ಇದ್ದೇವೆ. ಶೋಷಣೆಯ ಶ್ರೇಣೀಕರಣ ಮೇಲ್ಜಾತಿಗಳಲ್ಲಿ ಮಾತ್ರವಲ್ಲದೇ ಶೂದ್ರರಲ್ಲಿಯೂ ಇದೆ. ಸುಬ್ಬು ಹೊಲೆಯಾರ್ ತಮ್ಮ ಅನುಭವದ ಮೂಲಕ ಎಲ್ಲವನ್ನೂ ಕಟ್ಟಿಕೊಟ್ಟಿದ್ದಾರೆ. ಅವರು ಎಲ್ಲಿಯೂ ಆಕ್ರಮಣಶೀಲವಾಗಿ ಮಾತನಾಡುವುದು ಕಾಣುವುದಿಲ್ಲ. ಈ ‘ದುಃಖ ಆರದ ನೆಲದಲ್ಲಿ’ ಕೃತಿಯಲ್ಲಿ ಕರುಳು ಕಟ್ಟಿದ ಬರಹಗಳು ಇವೆ ಎಂದು ಅಭಿಪ್ರಾಯಪಟ್ಟರು.

ಸಿಎಂ ಆಪ್ತಕಾರ್ಯದರ್ಶಿ ಡಾ.ನೆಲ್ಲುಕುಂಟೆ ವೆಂಕಟೇಶ್ ಮಾತನಾಡಿ, ‘ಸುಬ್ಬು ಹೊಲೆಯಾರ್ ಅವರ ದುಃಖ ಆರದ ನೆಲದಲ್ಲಿ ಕೃತಿಯು 50 ವರ್ಷಗಳ ಚರಿತ್ರೆಯ ದಾಖಲೆಯಾಗಿದೆ. ಶೂದ್ರ, ಒಬಿಸಿ ಬರಹಗಾರರಿಗೆ ಇಲ್ಲದಂತ ಶಕ್ತಿ ದಲಿತ ಬರಹಗಾರರಿಗೆ ಸಿಕ್ಕಿದೆ. ಶೂದ್ರ, ಒಬಿಸಿ ಸಮುದಾಯಗಳು ನೆಲದ ಅಹಂಕಾರದಿಂದ ಹೊರಗೆ ಬರದಿದ್ಧರೇ ದೇಶ ಯಾರದೋ ಕೈಯಲ್ಲಿ ಹೋಗುತ್ತದೆ. ಇಡೀ ಪುಸ್ತಕದ ಉದ್ದಗಕ್ಕೂ ಬುದ್ಧ ಮತ್ತು ಡಾ.ಅಂಬೇಡ್ಕರ್ ಅವರ ಛಾಯೆ ಕಾಣುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಿರಿಯ ಹೋರಾಟಗಾರ ಎನ್.ವೆಂಕಟೇಶ್, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಪ್ರತಿನಿಧಿ ಡಾ.ಕೆ.ಪಿ.ಅಶ್ವಿನಿ, ಲೇಖಕ ಸುಬ್ಬು ಹೊಲೆಯಾರ್, ಹೋರಾಟಗಾರ ಹುಲಿಕುಂಟೆ ಮೂರ್ತಿ, ಮುರುಳಿ ಮೋಹನ್ ಕಾಟಿ, ಅಶ್ವಿನಿ ಬೋಧ್, ಚಂದ್ರು ಮತ್ತಿತರರು ಹಾಜರಿದ್ದರು.

‘ತಾಳ್ಮೆಯ ಕಾರಣದಿಂದ ಈ ಬರಹಗಳು ಬಹಳ ಮುಖ್ಯವಾಗುತ್ತವೆ. ಎಲ್ಲ ಲೇಖನಗಳಲ್ಲಿ ನೋವಿದೆ. ನೋವುಗಳನ್ನೂ ಹೂವುಗಳನ್ನಾಗಿ ಮಾಡುವ ವಿಸ್ಮಯವನ್ನು ಸುಬ್ಬು ಹೊಲೆಯಾರ್ ಬರಹದಲ್ಲಿ ಕಾಣುತ್ತೇವೆ. ಅವರ ಪ್ರತಿರೋಧ ಕೂಡ ವಿಸ್ಮಯವಾಗಿದೆ. ಸ್ವಂತ ಅನುಭವದ ಮುಖಾಂತರವೇ ದಲಿತರ ಚರಿತ್ರೆಯನ್ನು ಕಟ್ಟಿಕೊಡುತ್ತಾರೆ. ಮುಟ್ಪಿಸಿಕೊಳ್ಳದಿದ್ದವರ ಮನಸ್ಸನ್ನೇ ಮುಟ್ಟುವ ಬರಹವನ್ನು ಸುಬ್ಬು ಹೊಲೆಯಾರ್ ಬರೆದಿದ್ದಾರೆ. ಆತ್ಮಕಥನದ ಆಕಾಶದ ಜೊತೆಗೆ ದಲಿತ ಹೋರಾಟದ ಕಥನವನ್ನು ಕಟ್ಪಿಕೊಟ್ಟಿದ್ದಾರೆ. ಭಾವ ಕೋಶದಿಂದ ಒಳಗೊಳ್ಳುವಿಕೆಯ ವೈಚಾರಿಕತೆಯನ್ನು ನಾವು ಈ ಪುಸ್ತಕದಲ್ಲಿ ಕಾಣಬಹುದು’

-ಪ್ರೊ.ಬರಗೂರು ರಾಮಚಂದ್ರಪ್ಪ, ಹಿರಿಯ ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X