ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ಕಾರ್ಯಕರ್ತರು ವಶಕ್ಕೆ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಹಿನ್ನಲೆಯಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಗೃಹ ಕಚೇರಿ ಕೃಷ್ಣಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸದ ಬಳಿ ಜಮಾಯಿಸಿದ್ದರು. ಪೋಲಿಸರು ಎಲ್ಲ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ್ದಾರೆಂದು ಗೊತ್ತಾಗಿದೆ.
Next Story