ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : ಪರಿಶೀಲನಾ ತಂಡ ರಚನೆ
ಬೆಂಗಳೂರು: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ರಾಜ್ಯ ಸರಕಾರ ಪರಿಶೀಲನಾ ತಂಡ ರಚಿಸಿದ್ದು, ಐದು ದಿನಗಳಲ್ಲಿ ಎಸಿಎಸ್‌ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ನೇತೃತ್ವದ ತಂಡದಲ್ಲಿ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ್, ಬೆಂಗಳೂರು ವೈದ್ಯಕೀಯ ಕಾಲೇಜಿನ ಮೈಕ್ರೋಬಯೋಲಜಿಸ್ಟ್ ಡಾ.ಅಸೀಮಾ ಬಾನು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಯವರಿಂದ ನಾಮನಿರ್ದೇಶಿತ ಒಬ್ಬ ಹಿರಿಯ ಫಾರ್ಮಾಕಾಲಜಿ ಪ್ರಾಧ್ಯಾಪಕರು ಇದ್ದಾರೆ.
ಟೆಂಡರ್ ಮೂಲಕ ಔಷಧಿಗಳ ಖರೀದಿ ಮತ್ತು ಎಂಪ್ಯಾನಲ್ಡ್ ಲ್ಯಾಬೋರೇಟರಿಗಳಿಗೆ ಔಷಧಗಳ ಮಾದರಿಗಳನ್ನು ಒಳಪಡಿಸುವಲ್ಲಿ ಆಗಿರುವ ನಿಯಮಗಳ ಉಲ್ಲಂಘನೆಗಳ ಬಗ್ಗೆ ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಮತ್ತು ಲೋಪಗಳನ್ನು ಪರಿಶೀಲಿಸಿ ವರದಿ ನೀಡಲು ತಿಳಿಸಲಾಗಿದೆ.
Next Story