ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿ ಕೆಲವು ವಾಹನಗಳಿಗೆ ನಿಷೇಧ: ಹೆದ್ದಾರಿ ಪ್ರಾಧಿಕಾರ ಆದೇಶ
ಬೆಂಗಳೂರು- ಮೈಸೂರು ಹೆದ್ದಾರಿ- ಸಂಗ್ರಹ ಚಿತ್ರ
ಬೆಂಗಳೂರು: ಮೈಸೂರು- ಬೆಂಗಳೂರು ನಡುವಿನ ಎಕ್ಸ್ಪ್ರೆಸ್ ಹೈವೇಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿಷೇಧ ಹೇರಿದೆ. ಹೊಸ ಆದೇಶವು ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ.
ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಜುಲೈ 12ರಂದು ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಅದರಂತೆ ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.
ದ್ವಿಚಕ್ರ ವಾಹನ, ಮೂರು ಚಕ್ರದ ವಾಹನಗಳು, ಟ್ರಾಕ್ಟರ್ಗಳು ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಮಾರ್ಚ್ನಿಂದ ಜೂನ್ ತಿಂಗಳ ವರೆಗೆ 308 ಅವಘಾತಗಳು ಸಂಭವಿಸಿ 100 ಮಂದಿ ಮೃತಪಟ್ಟು, 335 ಜನ ಗಾಯಗೊಂಡಿದ್ದಾರೆ ಎಂದು ಇತ್ತೀಚೆಗೆ ಗೃಹ ಸಚಿವ ಪರಮೇಶ್ವರ್ ಸದನಕ್ಕೆ ಮಾಹಿತಿ ನೀಡಿದ್ದರು.