ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಿದ್ಧ : ಯತ್ನಾಳ್

ಯತ್ನಾಳ್
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸರ್ವಸಮ್ಮತ ಅಭ್ಯರ್ಥಿಯಾದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದ ಎಂದು ವಿಜಯಪುರ ಕ್ಷೇತ್ರದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದಿಲ್ಲಿ ಪ್ರಕಟಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಣದಿಂದ ನನ್ನನ್ನೇ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕೆಂದು ಒತ್ತಡ ಹಾಕಿದರೆ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ, ಯಾವುದೇ ಅನುಮಾನ ಬೇಡ’ ಎಂದು ನುಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತದೆಯೇ ಇಲ್ಲವೇ ಎಂಬುದನ್ನು ಕಾಲವೇ ನಿರ್ಧರಿಸಲಿದೆ. ಪ್ರಸ್ತುತ ಅಧ್ಯಕ್ಷ ವಿಜಯೇಂದ್ರ ಬದಲಾವಣೆ ಮಾಡಬೇಕೆಂಬುದು ಹಲವರ ಒತ್ತಾಯ. ಒಂದು ವೇಳೆ ಚುನಾವಣೆ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಬಯಸಿದರೆ ನಾವು ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದರು.
Next Story