Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಟ್ಟಡ ನಿರ್ಮಿಸುವಾಗ ಒತ್ತುವರಿ ಬಗ್ಗೆ...

ಕಟ್ಟಡ ನಿರ್ಮಿಸುವಾಗ ಒತ್ತುವರಿ ಬಗ್ಗೆ ತನಿಖೆ ನಡೆಸುವ ಅಧಿಕಾರ ಬಿಬಿಎಂಪಿಗೆ ಇಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Dec 2023 8:23 PM IST
share
ಕಟ್ಟಡ ನಿರ್ಮಿಸುವಾಗ ಒತ್ತುವರಿ ಬಗ್ಗೆ ತನಿಖೆ ನಡೆಸುವ ಅಧಿಕಾರ ಬಿಬಿಎಂಪಿಗೆ ಇಲ್ಲ: ಹೈಕೋರ್ಟ್

ಬೆಂಗಳೂರು: ಕಟ್ಟಡ ನಿರ್ಮಾಣದ ವೇಳೆ ಒತ್ತುವರಿಯ ಕುರಿತು ಯಾರಾದರೂ ದೂರು ನೀಡಿದರೆ ಅದರ ಬಗ್ಗೆ ತನಿಖೆ ನಡೆಸುವ ಅಧಿಕಾರ ಬಿಬಿಎಂಪಿಗೆ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಆದರೆ, ಮಂಜೂರಾದ ನಕ್ಷೆಯ ಪ್ರಕಾರ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪಾಲಿಕೆ ತನಿಖೆ ನಡೆಸಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಚೆನ್ನೈನ ಎಮರಾಲ್ಡ್ ಹೆವನ್ ಡೆವಲಪ್‍ ಮೆಂಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಬಿಬಿಎಂಪಿ ನ್ಯಾಯಾಂಗ ಪ್ರಾಧಿಕಾರವಲ್ಲ. ಹೀಗಾಗಿ, ಇಂತಹ ಪ್ರಕರಣಗಳಲ್ಲಿ ವ್ಯಾಜ್ಯದ ಬಗ್ಗೆ ವಿಚಾರಣೆ ನಡೆಸಲಾಗದು ಎಂದು ಆದೇಶಿಸಿದೆ.

ಒತ್ತುವರಿ ಬಗ್ಗೆ ಎಲ್ಲ ಅಂಶಗಳು ಬಿಬಿಎಂಪಿ ವ್ಯಾಪ್ತಿಗೆ ಒಳಪಡುವುದಿಲ್ಲ. ಆದರೆ, ನಕ್ಷೆ ಮಂಜೂರಾತಿ ಅಥವಾ ನಿಯಮ ಉಲ್ಲಂಘನೆಯಂತಹ ಪ್ರಕರಣಗಳು ಬಂದಾಗ ಅದರಲ್ಲಿ ಬಿಬಿಎಂಪಿ ಸಂಪೂರ್ಣ ಅಧಿಕಾರವಿದ್ದು, ಅದು ನಿಯಮದ ಪ್ರಕಾರ ಕಟ್ಟಡಗಳನ್ನು ನಿರ್ಮಿಸಲಾಗಿದೆಯೇ ಇಲ್ಲವೇ ಎಂದು ಪರಿಶೀಲಿಸಬಹುದು ಎಂದು ನ್ಯಾಯಪೀಠವು ಹೇಳಿದೆ. ಈ ವಿಚಾರದಲ್ಲಿ ಸಿವಿಲ್ ಕೋರ್ಟ್ ಏನಾದರೂ ಆದೇಶ ನೀಡಿದರೆ ಅದನ್ನು ಕಂಪೆನಿ ಪಾಲಿಸಬೇಕಾಗುತ್ತದೆ ಎಂದು ಪೀಠ ಆದೇಶಿಸಿದೆ.

ಪ್ರಕರಣವೇನು?: ಚೆನ್ನೈ ಮೂಲದ ಎಮರಾಲ್ಡ್ ಹೆವೆನ್ ಡೆವಲಪ್‍ ಮೆಂಟ್ ಲಿಮಿಟೆಡ್ ಕಂಪೆನಿ ಬೆಂಗಳೂರಿನ ಬೇಗೂರು ಹೋಬಳಿಯ ಬಸಾಪುರ ಗ್ರಾಮದಲ್ಲಿ ತನ್ನ ಜಾಗದಲ್ಲಿ ತಳಮಹಡಿ ಹೊರತುಪಡಿಸಿ 18 ಮಹಡಿಗಳ ಕಟ್ಟಡವನ್ನು ನಿರ್ಮಾಣ ಮಾಡಿತ್ತು. ಆದರೆ, ಕವಿತಾ ಶಂಕರ್ ಎಂಬುವರು ತನ್ನ ಒಂದು ಎಕರೆ ಜಾಗವನ್ನು ಕಂಪೆನಿ ಒತ್ತುವರಿ ಮಾಡಿಕೊಂಡಿದೆ ಎಂದು ದೂರು ನೀಡಿದ್ದರು.

ಅದನ್ನು ಆಧರಿಸಿ 2023ರ ಸೆ.14ರಂದು ಬಿಬಿಎಂಪಿಯ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕರು ನೋಟಿಸ್ ನೀಡಿ, ದಾಖಲೆಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದರು.

ಆ ನೋಟಿಸ್ ಅನ್ನು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದ ಕಂಪೆನಿಯು ಭೂಮಿಯನ್ನು 2019ರಲ್ಲಿ ಖರೀದಿಸಲಾಗಿತ್ತು. ಅನಂತರ ಬಿಬಿಎಂಪಿಯಿಂದ ನಕ್ಷೆ ಅನುಮೋದನೆ ಪಡೆದ ನಂತರ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೋಂದಾಯಿಸಿ ಕಟ್ಟಡ ನಿರ್ಮಾಣ ಚಟುವಟಿಕೆಯನ್ನು ಆರಂಭಿಸಲಾಗಿತ್ತು ಎಂದು ಹೇಳಿತ್ತು.

ಕವಿತಾ ಹಿಂದಿನ ಭೂ ಮಾಲಕರ ಕಡೆಯಿಂದ ಜಿಪಿಎ ಹೊಂದಿದ್ದಾರೆ. ಕಟ್ಟಡ ನಿರ್ಮಾಣ ಆರಂಭವಾದ ಬಳಿಕ ಒತ್ತುವರಿ ಮಾಡಿಕೊಳ್ಳಲಾಗಿದೆ, ತಾವು ಜಾಗದ ಮಾಲಕರು ಎಂದು ದಾವೆ ಹೂಡಿದ್ದಾರೆ. ಆದರೆ, ಬಿಎಂಪಿಗೆ ಒತ್ತುವರಿಯ ಬಗ್ಗೆ ತನಿಖೆ ನಡೆಸುವ ಯಾವುದೇ ಅಧಿಕಾರವಿಲ್ಲ, ಆ ಅಧಿಕಾರ ಸಿವಿಲ್ ಕೋರ್ಟ್‍ಗೆ ಮಾತ್ರ ಇದೆ ಎಂದು ಕಂಪೆನಿ ವಾದಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X