ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್‍ಶೀಟ್ ತಯಾರಾಗಿದೆ : ಬಿ.ದಯಾನಂದ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್‍ಶೀಟ್ ತಯಾರಾಗಿದೆ. ಸದ್ಯದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಲೆ ಪ್ರಕರಣದ ಚಾರ್ಜ್‍ಶೀಟ್ ಅನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಚಾರ್ಜ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ ಎಂದರು.
ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್‍ಎಸ್‍ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್‍ನ ಎಫ್‍ಎಸ್‍ಎಲ್‍ನಿಂದ ಕೆಲವು ವರದಿಗಳು ಬರಬೇಕಿವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈಗ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸಲಿದ್ದೇವೆ ಎಂದು ಅವರು ಹೇಳಿದರು.
Next Story