ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ | ಶಾಸಕ ಸತೀಶ್ ಸೈಲ್ಗೆ ಹೈಕೋರ್ಟ್ ರಿಲೀಫ್
ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ
ಸತೀಶ್ ಸೈಲ್
ಬೆಂಗಳೂರು : ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ 7 ವರ್ಷ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ.
ಅಲ್ಲದೆ, ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿರುವ ಹೈಕೋರ್ಟ್, 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.
ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
Next Story