ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ ಮೊರೆ ಹೋದ ಪೆಟಾ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ ಎಂದು Bar and Bench ಸುದ್ದಿ ಸಂಸ್ಥೆ ವರದಿ ಮಾಡಿದೆ.
ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠದ ಮುಂದೆ ನಡೆಯುತ್ತಿದೆ.
ಕಂಬಳವು ಪ್ರಾಣಿಗಳ ಪಾಲಿಗೆ ತೀರಾ ಹಿಂಸೆಯಾಗಿದೆ ಎಂದು ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದರು.
Next Story