ಭದ್ರಾವತಿ: ಸಿಡಿಲಾಘಾತಕ್ಕೆ ಇಬ್ಬರು ಸಹೋದರರು ಮೃತ್ಯು
ಸಾಂದರ್ಭಿಕ ಚಿತ್ರ (source: PTI)
ಶಿವಮೊಗ್ಗ, ನ.29: ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ.
ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು (32) ಮತ್ತು ಸುರೇಶ್ (35) ಮೃತಪಟ್ಟ ಯುವಕರು.
ಇವರ ಜಮೀನಿನಲ್ಲಿ ಭತ್ತ ಕಟಾವ್ ಮಾಡಿ ರಾಶಿ ಹಾಕಿದ್ದರು. ಕಳೆದ ರಾತ್ರಿ ಪರಿಸರದಲ್ಲಿ ಮಳೆಯಾಗಿದ್ದರಿಂದ ಭತ್ತವನ್ನು ರಕ್ಷಿಸಲು ಜಮೀನಿಗೆ ತೆರಳಿದ್ದರು. ಈ ಸಂದರ್ಭ ಸಿಡಿಲು ಬಡಿದು ಬೀರು ಮತ್ತು ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಮೀನಿಗೆ ಹೋದ ಸಹೋದರರು ತುಂಬಾ ಹೊತ್ತಾದರೂ ವಾಪಸ್ಸಾಗದ ಹಿನ್ನೆಲೆಯಲ್ಲಿ ಮನೆಮಂದಿ ಜಮೀನಿನ ಬಳಿ ಹುಡುಕಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Next Story